ಲೂಕನು 2:22

ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.

ಸಂದರ್ಭದೊಂದಿಗೆ ಓದಿ · ಲೂಕನು 2

20ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.

21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.

22ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.

23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).

24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.

ಲೂಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी