ಯಾಜಕಕಾಂಡ 14:43

ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

41ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ

42ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.

43ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ

44ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.

45ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी