೨ ಕೊರಿಂಥದವರಿಗೆ 7:14

ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 7

12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.

13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.

14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.

15ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.

16ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.

೨ ಕೊರಿಂಥದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी