ವಿಮೋಚನಕಾಂಡ 1:17

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 1

15ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.

16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.

17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

18ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.

19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.

ವಿಮೋಚನಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी