ಎಜ್ರನು 3:4

ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.

ಸಂದರ್ಭದೊಂದಿಗೆ ಓದಿ · ಎಜ್ರನು 3

2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್‌ ದೇವರ ಬಲಿಪೀಠವನ್ನು ಕಟ್ಟಿಸಿದರು.

3ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.

4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.

5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.

6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.

ಎಜ್ರನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी