ಯೋಹಾನನು 5:23

ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 5

21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.

22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;

23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी