ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
8ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ?
9ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು.
10ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
11ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ