ಅಪೊಸ್ತಲರ ಕೃತ್ಯಗಳು 16:27

ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.

26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

27ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.

28ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.

29ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी