೧ ತಿಮೊಥೆಯನಿಗೆ 5:3

ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 5

1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ

2ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.

3ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.

4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.

5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

೧ ತಿಮೊಥೆಯನಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी