ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
6ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
8ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ