ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ