ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
2ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
3ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
4ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ