ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ