ಅರಣ್ಯಕಾಂಡ 32:19

ನಾವು ಯೊರ್ದನ್‌ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್‌ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 32

17ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.

18ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.

19ನಾವು ಯೊರ್ದನ್‌ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್‌ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.

20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ

21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆ

ಅರಣ್ಯಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी