ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ