೧ ಅರಸುಗಳು 3:3

ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 3

1ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.

2ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.

3ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.

4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.

5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.

೧ ಅರಸುಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी