ಅಪೊಸ್ತಲರ ಕೃತ್ಯಗಳು 23:14

ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 23

12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

13ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.

14ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.

15ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ

16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.

ಅಪೊಸ್ತಲರ ಕೃತ್ಯಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी