ಮಾರ್ಕನು 10:48

ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.

47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.

48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.

49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.

50ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी