ಮತ್ತಾಯನು 26:41

ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

40ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.

42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.

43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी