ಯೆರೆಮಿಯ 48:17

ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

15ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.

16ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.

17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.

18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.

19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी