೧ ಸಮುವೇಲನು 6:3

ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 6

1ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.

2ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.

3ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.

4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.

5ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್‌ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.

೧ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी