ಮತ್ತಾಯನು 26:49

ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

48ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.

49ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

50ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी