ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ