ಯೆಹೆಜ್ಕೇಲನು 22:25

ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 22

23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --

24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,

25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.

27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.

ಯೆಹೆಜ್ಕೇಲನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी