ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
1ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
4ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
5ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ