ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
8ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ