ಧರ್ಮೋಪದೇಶಕಾಂಡ 2:32

ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 2

30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

31ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.

32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.

33ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;

34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.

ಧರ್ಮೋಪದೇಶಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी