ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
47ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ