ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
30ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
32ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ