ಲೂಕನು 9:21

ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--

ಸಂದರ್ಭದೊಂದಿಗೆ ಓದಿ · ಲೂಕನು 9

19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.

21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--

22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी