ಆದಿಕಾಂಡ 20:11

ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 20

9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.

10ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ

11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.

12ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.

13ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.

ಆದಿಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी