ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
30ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ