ಧರ್ಮೋಪದೇಶಕಾಂಡ 12:31

ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 12

29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ

30ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.

31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.

32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ಧರ್ಮೋಪದೇಶಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी