ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
5ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ