ಪ್ರಲಾಪಗಳು 4:3

ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 4

1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.

2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!

3ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.

4ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.

5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.

ಪ್ರಲಾಪಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी