ಪ್ರಲಾಪಗಳು 4:7

ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 4

5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.

6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.

7ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.

8ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.

9ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.

ಪ್ರಲಾಪಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी