ಯೆಹೆಜ್ಕೇಲನು 33:7

ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 33

5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.

6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.

7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.

8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.

9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.

ಯೆಹೆಜ್ಕೇಲನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी