ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
41ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ