ಯಾಜಕಕಾಂಡ 14:7

ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.

6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ

7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.

9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी