ಯೆಶಾಯ 11:5

ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.

ಸಂದರ್ಭದೊಂದಿಗೆ ಓದಿ · ಯೆಶಾಯ 11

3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;

4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.

6ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.

7ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.

ಯೆಶಾಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी