ಯೆರೆಮಿಯ 38:18

ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 38

16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.

17ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.

18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.

19ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.

20ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.

ಯೆರೆಮಿಯ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी