ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
36ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
37ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
38ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ