೧ ಕೊರಿಂಥದವರಿಗೆ 5:6

ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 5

4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ

5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.

6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?

7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.

೧ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी