ಯೆರೆಮಿಯ 44:6

ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 44

4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.

5ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.

6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.

7ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?

8ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?

ಯೆರೆಮಿಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी