ಯೋಹಾನನು 12:48

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

ಸಂದರ್ಭದೊಂದಿಗೆ ಓದಿ · ಯೋಹಾನನು 12

46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

47ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.

48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.

50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी