ಎಫೆಸದವರಿಗೆ 4:12

ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 4

10ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).

11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ

12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.

14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.

ಎಫೆಸದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी