ಯೆಹೆಜ್ಕೇಲನು 36:22

ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 36

20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.

21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.

22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.

23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.

ಯೆಹೆಜ್ಕೇಲನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी