೧ ಥೆಸಲೊನೀಕದವರಿಗೆ 3:4

ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 3

2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

4ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.

5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.

6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ

೧ ಥೆಸಲೊನೀಕದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी