ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
30ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
31ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
32ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ