ದಾನಿಯೇಲನು 7:5

ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 7

3ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.

4ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.

5ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.

6ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.

ದಾನಿಯೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी